Home ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಕೊಡಗು ಪ್ರವಾಸ ಬಿಜೆಪಿ ಕಾರ್ಯಕರ್ತರಿಂದ ರಸ್ತೆ ತಡೆ..!!

ಅರಣ್ಯ ಸಚಿವ ಈಶ್ವರ ಖಂಡ್ರೆ ಕೊಡಗು ಪ್ರವಾಸ ಬಿಜೆಪಿ ಕಾರ್ಯಕರ್ತರಿಂದ ರಸ್ತೆ ತಡೆ..!!

27
0

(ಕೊಡಗು)ಕುಶಾಲನಗರ : ಗುಡ್ಡೆಹೊಸೂರಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಈ ಪ್ರತಿಭಟನೆಯಲ್ಲಿ, ಜಿಲ್ಲೆಯಲ್ಲಿ ಮಿತಿಮೀರಿರುವ ಆನೆ-ಮಾನವ ಸಂಘರ್ಷ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ, ಸಿ ಅಂಡ್ ಡಿ ಜಮೀನು ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಸಚಿವರ ವಾಹನ ತಡೆಯಲು ಪ್ರಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಸ್ಥಳದಿಂದ ತೆರವುಗೊಳಿಸಿದರು.

ವರದಿ: ಪ್ರಿತುನ್ ಪೂವಣ್ಣ