Home Shivamogga ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಅರ್ಜಿ..!!

ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಅರ್ಜಿ..!!

19
0

ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2 ಎ, 3 ಎ , 3 ಬಿ ,ಪ . ಜಾ /ಪ ಸೇರಿದ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಯನ್ನು https://shp. karnatak a.gov.in/bcwd ಮೂಲಕ ಜೂನ್ 8 ರೊಳಗಾಗಿ ಸಲ್ಲಿಸುವುದು.

ಅರ್ಜಿಯನ್ನು ಸಲ್ಲಿಸಲು ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ. ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ರೂ.2.50 ಲಕ್ಷಕ್ಕಿಂತ ಮೀರಿರ ಬಾರದು.

ಪ್ರವರ್ಗ 2 ಎ, 2ಬಿ, 3ಎ, 3ಬಿ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ರೂ.1.00 ಲಕ್ಷ ಮೀರಿರಬಾರದು.

ತಾಲೂಕುವಾರು ವಿದ್ಯಾರ್ಥಿನಿಲಯದ ವಿವರ ಹಾಗೂ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸ ಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರಿ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ ವಿಳಾಸ https://bcwd.karnataka.gov.inನ್ನು ಸಂಪರ್ಕಿಸುವುದು.

ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ http://bcwdhe Ipline.karnataka. gmail.com ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಹಿಂದು ಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಅಗತ್ಯ ದಾಖಲೆ ಗಳೊಂದಿಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ ಸಂ.http://8050770004 ಸಂಪರ್ಕಿಸುವುದು.