Home ರಾಜ್ಯ ಸಿದ್ದು ರಾಜೀನಾಮೆ ರಾಜ್ಯ ಪಾಲರಿಂದ ಅಂಗೀಕಾರ..!!

ಸಿದ್ದು ರಾಜೀನಾಮೆ ರಾಜ್ಯ ಪಾಲರಿಂದ ಅಂಗೀಕಾರ..!!

12
0

✒️..ಅಮಿತ್ ಆರ್ ಆನಂದಪುರ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಈಗ ರಾಜೀನಾಮೆ ಅಂಗಿಕಾರ ಗೊಂಡಿದೆ.

ಮುಖ್ಯಮಂತ್ರಿಗಳ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ.

ಈ ಕುರಿತು ರಾಜಭವನದಿಂದ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಮುಖ್ಯಮಂತ್ರಿಗಳ ರಾಜೀನಾಮೆ ಅಂಗೀಕಾರದ ಬೆನ್ನಲ್ಲೇ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವನ್ನೂ ವಿಸರ್ಜಿಸಲಾಗಿದೆ.

ಭಾರತೀಯ ಸಂವಿಧಾನದ ವಿಧಿ 164(1) ರ ಅಡಿಯಲ್ಲಿ ತಮಗೆ ಪ್ರದತ್ತವಾದ ಅಧಿಕಾರವನ್ನು ಬಳಸಿ ರಾಜ್ಯಪಾಲರು ಈ ಆದೇಶ ಹೊರಡಿಸಿದ್ದಾರೆ.

ಹಂಗಾಮಿ ಸಿಎಂ ಆಗಿ ಮುಂದುವರಿಕೆ:

ರಾಜೀನಾಮೆ ಅಂಗೀಕಾರವಾಗಿದ್ದರೂ, ರಾಜ್ಯದಲ್ಲಿ ಮುಂದಿನ ಪರ್ಯಾಯ ರಾಜಕೀಯ ವ್ಯವಸ್ಥೆ ಅಥವಾ ನೂತನ ಮುಖ್ಯಮಂತ್ರಿಗಳ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.