Home Shivamogga ಶಿವಮೊಗ್ಗ ನಗರದಲ್ಲಿ ಕ್ರೈನ್ ಗೆ ಸಿಲುಕಿ ಕಾರ್ಮಿಕ ಸಾವು..!!

ಶಿವಮೊಗ್ಗ ನಗರದಲ್ಲಿ ಕ್ರೈನ್ ಗೆ ಸಿಲುಕಿ ಕಾರ್ಮಿಕ ಸಾವು..!!

16
0

ಶಿವಮೊಗ್ಗ:ನಗರದ ಹೊಸಮನೆ ದೊಡ್ಡಮ್ಮ ದೇವಸ್ಥಾನದ ಬಳಿ ಕ್ರೇನ್ ಗೆ ಸಿಲುಕಿ ಕೂಲಿ ಕಾರ್ಮಿಕನೊಬ್ಬ ಮೃತ ಪಟ್ಟ ದುರ್ಘಟನೆ ಶನಿವಾರ (ಜೂ.6) ಸಂಜೆ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಪಿಲಿಗೂಡು ನಿವಾಸಿ ನಾಗೇಶ್ (45) ಎಂದು ಗುರುತಿಸಲಾಗಿದೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ನಾಗೇಶ್ ಅವರು ದೇವಸ್ಥಾನದ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸಲು ಶುಕ್ರವಾರ ಶಿವಮೊಗ್ಗಕ್ಕೆ ಬಂದಿದ್ದರು. ಕೆಲಸ ಮಾಡುವ ವೇಳೆ ಕ್ರೇನ್‌ಗೆ ಸಿಕ್ಕಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕ್ರೇನ್‌ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಈ ಕುರಿತು ಸಂಬಂಧಿತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.