Home Shivamogga Sagara ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಮನವಿ: ಶರತ್ ನಾಗಪ್ಪ ನೇತೃತ್ವದಲ್ಲಿ ಒತ್ತಾಯ..!!

ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಮನವಿ: ಶರತ್ ನಾಗಪ್ಪ ನೇತೃತ್ವದಲ್ಲಿ ಒತ್ತಾಯ..!!

3
0

✒️..ಅಮಿತ್ ಆರ್ ಆನಂದಪುರ

ಸಾಗರ: ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಹೊಸೂರು ಕಾಂಗ್ರೆಸ್ ಘಟಕದ ಮುಖಂಡರು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹೊಸೂರು ಮಾತನಾಡಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶರತ್ ನಾಗಪ್ಪ, ಗೋಪಾಲಕೃಷ್ಣ ಬೇಳೂರು ಅವರು ಜನರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಜನನಾಯಕರಾಗಿದ್ದು, ಮಲೆನಾಡು ಭಾಗದ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅವರ ಸೇವೆ ಮತ್ತು ಪಕ್ಷದ ಸಂಘಟನೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಮನವಿ ಸಲ್ಲಿಸುವ ವೇಳೆ ಹೊಸೂರು ಕಾಂಗ್ರೆಸ್ ಘಟಕದ ಅಧ್ಯಕ್ಷ ಲೋಕೇಶ್ ಜಿ.ಎಚ್., ಮಾಜಿ ಉಪಾಧ್ಯಕ್ಷ ಚೌಡಪ್ಪ ವರದಮೂಲ, ಸದಸ್ಯ ಹರೀಶ್ ಗೌಡ, ನಂದಿತಳೆ ಸಹಕಾರಿ ಸಂಘದ ನಿರ್ದೇಶಕ ದಿನೇಶ್ ಐಗಿನಬೈಲ್, ಮುಖಂಡ ಸತೀಶ್ ಮಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.