Home Shivamogga Sagara ಸಾಗರ ತಾಲೂಕಿನಲ್ಲಿ ಭಾರೀ ಗಾಳಿ-ಮಳೆ: ನಾಳೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ..!!

ಸಾಗರ ತಾಲೂಕಿನಲ್ಲಿ ಭಾರೀ ಗಾಳಿ-ಮಳೆ: ನಾಳೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ..!!

126
0

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಾಗೂ ವಿಪರೀತ ಗಾಳಿಯ ಹಿನ್ನೆಲೆಯಲ್ಲಿ, ನಾಳೆ (ಜುಲೈ 7, 2026) ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮಾನ್ಯ ತಹಶೀಲ್ದಾರ್ ಅವರ ಸೂಚನೆಯ ಮೇರೆಗೆ ಈ ಆದೇಶ ಹೊರಡಿಸಲಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗಿದೆ.

ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ (BEO) ಸಾಗರ ಅವರು ತಾಲೂಕಿನ ಎಲ್ಲಾ ಮುಖ್ಯ ಶಿಕ್ಷಕರಿಗೆ ಮಾಹಿತಿ ನೀಡಿದ್ದು, ಘೋಷಿಸಲಾದ ರಜೆಯನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಜಾಹೀರಾತು