✒️..ಅಮಿತ್ ಆರ್ ಆನಂದಪುರ
ಆನಂದಪುರ/ಸಾಗರ: ಮಲೆನಾಡು ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಬೇಕಾದರೆ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ನೀಡಿದರು.
ಶಿಕಾರಿಪುರದಿಂದ ಹೊಸನಗರದತ್ತ ಪ್ರಯಾಣಿಸುತ್ತಿದ್ದ ಸಚಿವ ಸತೀಶ್ ಜಾರಕಿಹೊಳಿಯವರನ್ನು ಆನಂದಪುರದಲ್ಲಿ ಕಾಂಗ್ರೆಸ್ ಮುಖಂಡರು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಮಲೆನಾಡಿನ ಸಮಸ್ಯೆಗಳ ಅರಿವು ಹೊಂದಿರುವ, ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುವ ಹಾಗೂ ಹಿಂದುಳಿದ ವರ್ಗಗಳ ಪರವಾಗಿ ಕೆಲಸ ಮಾಡುತ್ತಿರುವ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ದೊರೆತರೆ ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡು ಭಾಗದ ಅಭಿವೃದ್ಧಿಗೆ ಹೊಸ ಚೈತನ್ಯ ಸಿಗಲಿದೆ ಎಂದು ಪ್ರಮುಖರಾದ ಲಿಂಗರಾಜ್ ಗೇರುಬೀಸು ಅಭಿಪ್ರಾಯ ವ್ಯಕ್ತಪಡಿಸಿದರು.
ಭೇಟಿಯ ವೇಳೆ ಆನಂದಪುರ ಕಾಂಗ್ರೆಸ್ ಘಟಕದ ಅಧ್ಯಕ್ಷ ಗಜೇಂದ್ರ, ಮುಖಂಡರಾದ ಉಮೇಶ್, ರಮಾನಂದ, ಖಲಿಮುಲ್ಲಾ ಖಾನ್ , ರಹಮತ್ ವುಲ್ಲಾ, ವಿಜಯ್ ಕುಮಾರ್, ಸಿರಿಜಾನ್, ಅಮೀರ್, ಎಂ ಎಲ್ ಈಶ್ವರ, ಮಂಜುನಾಥ್ , ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
ಜಾಹೀರಾತು












