ಸಾಗರ, ಆ. 2: ಸಾಗರ ತಾಲೂಕಿನಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ 2026ರ ಆಗಸ್ಟ್ 3 (ಸೋಮವಾರ) ರಂದು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜು ಡಿಪ್ಲೋಮಾ ಕಾಲೇಜು ಐಟಿಐ ಕಾಲೇಜು ಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.
ಸಾಗರ ತಹಶೀಲ್ದಾರ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಪೋಷಕರು ಮಕ್ಕಳನ್ನು ಅನಗತ್ಯವಾಗಿ ಹೊರಗೆ ಕಳುಹಿಸದೇ ಸುರಕ್ಷಿತವಾಗಿ ಮನೆಯಲ್ಲೇ ಇರುವಂತೆ ಮನವಿ ಮಾಡಿದ್ದಾರೆ. ಸಾರ್ವಜನಿಕರು ಕೂಡ ಮಳೆಯ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಿ, ತುರ್ತು ಅಗತ್ಯವಿದ್ದರೆ ಮಾತ್ರ ಸಂಚರಿಸುವಂತೆ ಸೂಚಿಸಲಾಗಿದೆ.











