Home Shivamogga ಮತ್ತೆ ಮಧು ಬಂಗಾರಪ್ಪರಿಗೆ ಒಲಿದ ಸಚಿವ ಸ್ಥಾನ..!!

ಮತ್ತೆ ಮಧು ಬಂಗಾರಪ್ಪರಿಗೆ ಒಲಿದ ಸಚಿವ ಸ್ಥಾನ..!!

47
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಶಿವಮೊಗ್ಗ ಜಿಲ್ಲೆಗೆ ಮತ್ತೊಮ್ಮೆ ಸಚಿವ ಸ್ಥಾನ ಲಭಿಸಿದ್ದು, ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರಿಗೆ ಪುನಃ ಸಚಿವರಾಗಿ ಅವಕಾಶ ದೊರೆತಿದೆ ಎನ್ನಲಾಗುತ್ತಿದೆ.

ಮಧು ಬಂಗಾರಪ್ಪ ಅವರು ಶೀಘ್ರದಲ್ಲೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರಿಗೆ ಯಾವ ಖಾತೆ ನೀಡಲಾಗುತ್ತದೆ ಎಂಬುದು ಇನ್ನಷ್ಟೇ ಅಧಿಕೃತವಾಗಿ ಪ್ರಕಟವಾಗಬೇಕಿದೆ.

ಕಾಂಗ್ರೆಸ್ ಹೈಕಮಾಂಡ್ ಅಂತಿಮ ಪಟ್ಟಿಗೆ ಅನುಮೋದನೆ ನೀಡಿದ ಬಳಿಕ ಅವರ ಹೆಸರು ಅಧಿಕೃತವಾಗಿ ಪ್ರಕಟವಾಗಿದೆ. ಈಗಾಗಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಧು ಬಂಗಾರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಸಚಿವರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶುಭಾಶಯ ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.