Home Shivamogga ಮಧು ಬಂಗಾರಪ್ಪ ಸಚಿವರಾಗಿರುವುದು ಶಿವಮೊಗ್ಗಕ್ಕೆ ಹೆಮ್ಮೆ: ಎಚ್.ಆರ್. ರವಿಕುಮಾರ್..!!

ಮಧು ಬಂಗಾರಪ್ಪ ಸಚಿವರಾಗಿರುವುದು ಶಿವಮೊಗ್ಗಕ್ಕೆ ಹೆಮ್ಮೆ: ಎಚ್.ಆರ್. ರವಿಕುಮಾರ್..!!

24
0

ಸಾಗರ: ರಾಜ್ಯ ಸಚಿವ ಸಂಪುಟದಲ್ಲಿ ಸೊರಬ ಕ್ಷೇತ್ರದ ಶಾಸಕ ಎಸ್. ಮಧು ಬಂಗಾರಪ್ಪ ಸಚಿವರಾಗಿ ಅಧಿಕಾರ ಸ್ವೀಕರಿಸಿರುವುದು ಈಡಿಗ ಸಮುದಾಯಕ್ಕೆ ಮಾತ್ರವಲ್ಲ, ಇಡೀ ಶಿವಮೊಗ್ಗ ಜಿಲ್ಲೆಗೆ ಅತ್ಯಂತ ಸಂತಸದ ಹಾಗೂ ಹೆಮ್ಮೆಯ ವಿಷಯವಾಗಿದೆ ಎಂದು ಸಿಗಂದೂರು ದೇವಸ್ಥಾನದ ಕಾರ್ಯದರ್ಶಿ ಹಾಗೂ ಸಾಗರ ಪ್ರಾಂತ್ಯ ಆರ್ಯ ಈಡಿಗ ಸಂಘದ ಅಧ್ಯಕ್ಷ ಎಚ್.ಆರ್. ರವಿಕುಮಾರ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಸಚಿವ ಎಸ್. ಮಧು ಬಂಗಾರಪ್ಪ ಅವರು ತಮ್ಮ ಆಡಳಿತ ಅನುಭವ, ಜನಪರ ಕಾಳಜಿ ಹಾಗೂ ಅಭಿವೃದ್ಧಿಪರ ದೃಷ್ಟಿಕೋನದ ಮೂಲಕ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ, ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಮಾದರಿ ಆಡಳಿತ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ನೂತನ ಸಚಿವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಯಶಸ್ಸು ದೊರೆಯಲಿ ಎಂದು ಸಿಗಂದೂರು ಶ್ರೀ ಚೌಡೇಶ್ವರಿ ದೇವಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಶುಭ ಹಾರೈಸಿರುವುದಾಗಿ ಅವರು ತಿಳಿಸಿದ್ದಾರೆ.

ಜಾಹೀರಾತು