Home Shivamogga ಬಿಜೆಪಿ ಸೇರ್ಪಡೆ ಕುರಿತು ಕೆ.ಎಸ್. ಈಶ್ವರಪ್ಪ ಮಹತ್ವದ ಹೇಳಿಕೆ..!!

ಬಿಜೆಪಿ ಸೇರ್ಪಡೆ ಕುರಿತು ಕೆ.ಎಸ್. ಈಶ್ವರಪ್ಪ ಮಹತ್ವದ ಹೇಳಿಕೆ..!!

28
0

ಶಿವಮೊಗ್ಗ: ಬಿಜೆಪಿ ನನ್ನ ಮಾತೃ ಪಕ್ಷವಾಗಿದ್ದು, ಪಕ್ಷದಲ್ಲಿರುವ ಗೊಂದಲಗಳು ಬಗೆಹರಿದು ಅಗತ್ಯ ಸುಧಾರಣೆಗಳಾದರೆ ಮತ್ತೆ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಮಾಜಿ ಉಪಮುಖ್ಯಮಂತ್ರಿ  ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ನನ್ನನ್ನು ಮರಳಿ ಸೇರಿಸಬೇಕೆಂಬ ಪ್ರಯತ್ನಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಪಕ್ಷದ ಕೆಲವು ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದು, ಪಕ್ಷದ ಸಂಘಟನೆಯಲ್ಲಿ ಕೆಲವು ಸುಧಾರಣೆಗಳು ಆಗಬೇಕು ಹಾಗೂ ಗೊಂದಲಗಳು ಬಗೆಹರಿಯಬೇಕು ಎಂಬುದನ್ನು ತಿಳಿಸಿದ್ದೇನೆ. ಬಿಜೆಪಿ ಶುದ್ಧೀಕರಣವಾಗಬೇಕು ಎಂಬುದು ನನ್ನ ಆಶಯವಾಗಿದೆ ಎಂದರು.

ಸಮಾಜವಾದಿ ಹಾಗೂ ಕಾಂಗ್ರೆಸ್ ಪಕ್ಷದಿಂದಲೂ ನನಗೆ ಕರೆಗಳು ಬಂದಿವೆ. ಆದರೆ ನಾನು ಬಿಜೆಪಿ ಬಿಟ್ಟು ಬೇರೆ ಯಾವುದೇ ಪಕ್ಷಕ್ಕೂ ಹೋಗುವುದಿಲ್ಲ. ನನ್ನ ಪ್ರಾಣ ಹೋದರೂ ಬಿಜೆಪಿ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪಕ್ಷದ ಸಂಘಟನೆ ದೃಷ್ಟಿಯಿಂದ ಕೆಲವು ಬೇಡಿಕೆಗಳನ್ನು ಬಿಜೆಪಿ ನಾಯಕರ ಮುಂದಿಟ್ಟಿದ್ದೇನೆ. ಆದರೆ ಬಿಜೆಪಿಗೆ ಸೇರ್ಪಡೆಯಾಗಲು ಯಾವುದೇ ಷರತ್ತು ವಿಧಿಸಿಲ್ಲ. ಪಕ್ಷದಲ್ಲಿರುವ ಸಮಸ್ಯೆಗಳು ಬಗೆಹರಿದು, ಸೂಕ್ತ ವಾತಾವರಣ ನಿರ್ಮಾಣವಾದರೆ ಬಿಜೆಪಿಗೆ ಮರಳುವ ವಿಚಾರದಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಈಶ್ವರಪ್ಪ ಹೇಳಿದರು.

ಜಾಹೀರಾತು