ಸಾಗರ: ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರಿ ನೌಕರರೊಂದಿಗೆ ನಡೆಸಲಿರುವ ಸಂವಾದ ಕಾರ್ಯಕ್ರಮವನ್ನು ನಾಳೆ ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಆಯೋಜಿಸಲಾಗಿದೆ.
ಇದರ ಅಂಗವಾಗಿ ಸಾಗರ ತಹಶೀಲ್ದಾರ್ ಅವರ ಆದೇಶದಂತೆ ಆನಂದಪುರ ಹೋಬಳಿಯ ಮಟ್ಟದಲ್ಲಿ ಸರ್ಕಾರಿ ನೌಕರರ ಸಂವಾದ ಕಾರ್ಯಕ್ರಮವನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಆಯೋಜಿಸಲಾಗಿದೆ.
ಆನಂದಪುರ ಹೋಬಳಿಯಲ್ಲಿ ತುರ್ತು ಸೇವೆ ನೀಡುತ್ತಿರುವ ಆರೋಗ್ಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಾಲೆಯ ಶಿಕ್ಷಕರು, ಉಪನ್ಯಾಸಕರನ್ನು ಹೊರತುಪಡಿಸಿ, ಉಳಿದ ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಆನಂದಪುರ ಉಪತಹಶೀಲ್ದಾರ್ ಶಾಂತಮೂರ್ತಿ ತಿಳಿಸಿದ್ದಾರೆ.
ಸರ್ಕಾರಿ ನೌಕರರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಡೆಸಲಿರುವ ಸಂವಾದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.
ಜಾಹೀರಾತು












