ಆನಂದಪುರ ಸುತ್ತಮುತ್ತಲಿನಿಂದ 80ನೇ ಸ್ವತಂತ್ರ ದಿನಾಚರಣೆ ಬಹಳಷ್ಟು ಅದ್ದೂರಿಯಾಗಿ ಜರುಗಿತು.

ಪೊಲೀಸ್ ಠಾಣೆಯಲ್ಲಿ ಪಿ ಎಸ್ ಐ ಪ್ರವೀಣ್ ಧ್ವಜಾರೋಹಣ ನೆರವೇರಿಸಿದರು ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಿದ್ದಾರೂಡ, ದೇವಿದಾಸ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಅದೇರೀತಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರಾಂಶುಪಾಲಾರದ ರವಿಶಂಕರ್ , ಈಶ್ವರಪ್ಪ ಧ್ವಜಾರೋಹಣ ಮಾಡಿದರು ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಪ್ರಮುಖರು ಪಾಲ್ಗೊಂಡಿದ್ದರು.

ಜೈ ಕರುನಾಡು ಆಟೋ ಚಾಲಕರ ಸಂಘದವರು ಆನಂದಪುರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಧ್ವಜಾರೋಹಣ ಕಾರ್ಯಕ್ರಮವನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರತ್ನಾಕರ ಹೊನಗೋಡು ನೆರವೇರಿಸಿದರು. ಆಟೋ ಚಾಲಕ ಮತ್ತು ಮಾಲೀಕ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಪಾಲ್ಗೊಂಡಿದ್ದರು.

ಆನಂದಪುರ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ಯಾರಂಟಿ ಸಮಿತಿ ಸದಸ್ಯರಾದ ಸಿರಿಜಾನ್ ನೆರವೇರಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ನಾಡ ಕಚೇರಿಯಲ್ಲಿ ಧ್ವಜಾರೋಹಣವನ್ನು ಉಪ ತಹಸೀಲ್ದಾರ್ ಶಾಂತ ಮೂರ್ತಿ ಮಾಡಿದರು. ರಾಜಸ್ವ ನಿರೀಕ್ಷಕರಾದ ಕವಿರಾಜ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ದಾಸಕೊಪ್ಪದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಧ್ವಜಾರೋಹಣವನ್ನು ನಿವೃತ್ತ ಅರಣ್ಯ ಅಧಿಕಾರಿ ಸುಬ್ರಹ್ಮಣ್ಯ ನೆರವೇರಿಸಿದರು. ಪ್ರಮುಖರಾದ ನಾಗರಾಜ್, ವಿಕಾಸ್, ಸುರೇಶ್ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಗೌತಮಪುರದ ವಿದ್ಯಾಭಾರತಿ ಇಂಗ್ಲಿಷ್ ಮೀಡಿಯಂ ಹಾಗೂ ಜಿ.ಆರ್. ಮೆಮೋರಿಯಲ್ ಹೈ ಸ್ಕೂಲ್ ನಲ್ಲಿ ನಿವೃತ್ತ ದೈಹಿಕ ಶಿಕ್ಷಕರಾದ ಬೆಳ್ಳಿಯಪ್ಪ ಅವರು ಧ್ವಜಾರೋಹಣ ನೆರವೇರಿಸಿದರು.ಸಂಸ್ಥೆಯ ಕಾರ್ಯದರ್ಶಿ ನಾಗರತ್ನ ಎಸ್.ಕೆ. ಅವರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುನಿತಾ ಹೆಗಡೆ ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.











