Home Blog ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ: ಸಾಗರದ ಇಬ್ಬರು ರಂಗಕರ್ಮಿಗಳು ಆಯ್ಕೆ..!!

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ: ಸಾಗರದ ಇಬ್ಬರು ರಂಗಕರ್ಮಿಗಳು ಆಯ್ಕೆ..!!

41
0

✒️..ಅಮಿತ್ ಆರ್ ಆನಂದಪುರ

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯು 2026–27ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಗೌರವ ಪ್ರಶಸ್ತಿಗಳು, ವಾರ್ಷಿಕ ಪ್ರಶಸ್ತಿಗಳು ಹಾಗೂ ವಿವಿಧ ದತ್ತಿ ಪುರಸ್ಕಾರಗಳನ್ನು ಪ್ರಕಟಿಸಿದ್ದು, ರಾಜ್ಯದ ಒಟ್ಟು 33 ಹಿರಿಯ ರಂಗಕರ್ಮಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಇದರಲ್ಲಿ 3 ಜನರಿಗೆ ಜೀವಮಾನ ಸಾಧನೆ ಗೌರವ ಪ್ರಶಸ್ತಿ, 23 ಜನರಿಗೆ ವಾರ್ಷಿಕ ಅಕಾಡೆಮಿ ಪ್ರಶಸ್ತಿ ಹಾಗೂ 7 ಜನರಿಗೆ ದತ್ತಿ ಪುರಸ್ಕಾರ ನೀಡಲಾಗಿದೆ.

ಈ ಬಾರಿಯ ಪ್ರಶಸ್ತಿ ಪಟ್ಟಿಯಲ್ಲಿ ಸಾಗರದ ಇಬ್ಬರು ರಂಗಕರ್ಮಿಗಳು ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಶ್ರೀಮತಿ ಫಣಿಯಮ್ಮ ಹೆಚ್.ಎಸ್. ಹಾಗೂ ಡಾ. ಎಂ. ಗಣೇಶ್ ಹೆಗ್ಗೋಡು ಅವರು ವಾರ್ಷಿಕ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರಂಗಭೂಮಿ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸಲ್ಲಿಸುತ್ತಿರುವ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಇವರಿಬ್ಬರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಗರದ ಇಬ್ಬರು ರಂಗಕರ್ಮಿಗಳಿಗೆ ರಾಜ್ಯಮಟ್ಟದ ಪ್ರತಿಷ್ಠಿತ ಪ್ರಶಸ್ತಿ ದೊರೆತಿರುವುದು ಮಲೆನಾಡಿನ ರಂಗಭೂಮಿ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ಕರ್ನಾಟಕದ ವಿವಿಧ ಭಾಗಗಳಲ್ಲಿ ರಂಗಭೂಮಿಯ ಬೆಳವಣಿಗೆಗೆ ದಶಕಗಳಿಂದ ಶ್ರಮಿಸುತ್ತಿರುವ ಹಿರಿಯ ಕಲಾವಿದರು, ರಂಗಕರ್ಮಿಗಳು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.

ಒಟ್ಟು 33 ಸಾಧಕರಿಗೆ ಗೌರವ ದೊರೆತಿದ್ದು, ಅವರಲ್ಲಿ ಸಾಗರದ ಇಬ್ಬರು ರಂಗಕರ್ಮಿಗಳ ಆಯ್ಕೆ ಸ್ಥಳೀಯ ರಂಗಾಸಕ್ತರಲ್ಲಿ ಸಂತಸ ಮೂಡಿಸಿದೆ.

ಜಾಹಿರಾತು