ಶಿವಮೊಗ್ಗ: ಜನಪದ ಕಲೆಗಳು ಮತ್ತು ಕನ್ನಡ ಸಿನೇಮಾದ ಕುರಿತು ವಿಶ್ಲೇಷಣಾತ್ಮಕ ಅಧ್ಯಯನ ಮಾಡಿರುವ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಶೋಧನಾರ್ಥಿ ಸಂಗೀತಂ ಬಿ.ಜಿ. ಅವರು ಪಿಎಚ್‌ಡಿ ಪದವಿಗೆ ಭಾಜನರಾಗಿದ್ದಾರೆ.
‘ಜನಪದ ಕಲೆಗಳು ಮತ್ತು ಕನ್ನಡ ಸಿನೇಮಾ: ಒಂದು ವಿಶ್ಲೇಷಣಾತ್ಮಕ ಅಧ್ಯಯನ’ ಎಂಬ ಶೀರ್ಷಿಕೆಯಡಿ ಸಂಶೋಧನಾ ಪ್ರಬಂಧ ಮಂಡಿಸಿರುವ ಸಂಗೀತಂ ಅವರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕ ಸತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಪೂರ್ಣಗೊಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಾಳುಗೋಡು ಗ್ರಾಮದ ಮೂಲದವರಾದ ಸಂಗೀತಂ ಅವರು, ತುಂಗಾ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ. ಬಿ. ಗಣಪತಿ ಹಾಗೂ ಉಪನ್ಯಾಸಕಿ ಡಿ.ಎಸ್. ಪುಷ್ಪಾವತಿ ಅವರ ಪುತ್ರರಾಗಿದ್ದಾರೆ.











