Home Blog ತುಮಕೂರು ದಸರಾಗೆ ಅದ್ದೂರಿ ಚಾಲನೆ; ಕ್ರೀಡೆ–ಸಂಸ್ಕೃತಿಯ ಸಂಭ್ರಮಕ್ಕೆ ಪರಮೇಶ್ವರ್ ಕರೆ..!!

ತುಮಕೂರು ದಸರಾಗೆ ಅದ್ದೂರಿ ಚಾಲನೆ; ಕ್ರೀಡೆ–ಸಂಸ್ಕೃತಿಯ ಸಂಭ್ರಮಕ್ಕೆ ಪರಮೇಶ್ವರ್ ಕರೆ..!!

8
0

✒️.. ಪವನ್ ಕಲ್ಯಾಣ್ ತುಮಕೂರು

ತುಮಕೂರು: ತುಮಕೂರು ದಸರಾ ಹಬ್ಬದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಚಾಲನೆ ನೀಡಿದರು.

ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಮೈಸೂರು ದಸರಾ ಮಾದರಿಯಲ್ಲಿ ತುಮಕೂರು ದಸರಾ ಹಬ್ಬಕ್ಕೂ ಹೆಚ್ಚಿನ ಪ್ರಚಾರ ನೀಡುವಂತೆ ಸಾರ್ವಜನಿಕರು, ಯುವಜನರು ಹಾಗೂ ಮಾಧ್ಯಮ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು.

ದಸರಾ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ವಿವಿಧ ಕ್ರೀಡಾ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದ ಕ್ರೀಡಾಪಟುಗಳು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದು, ಸ್ಥಳೀಯ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ಜಿ. ಪರಮೇಶ್ವರ್, ಕಳೆದ ಆರು–ಏಳು ವರ್ಷಗಳಿಂದ ತುಮಕೂರು ದಸರಾ ಆಚರಿಸಿಕೊಂಡು ಬರಲಾಗುತ್ತಿದೆ. ಕಳೆದ ಬಾರಿ ಅದ್ದೂರಿಯಾಗಿ ದಸರಾ ಆಚರಿಸಲಾಗಿದ್ದು, ಈ ಬಾರಿಯೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಶಾಂತಿಯುತ ಹಾಗೂ ಸುಗಮವಾಗಿ ದಸರಾ ಆಚರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ದಸರಾ ಹಬ್ಬವು ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಸೌಹಾರ್ದತೆಯನ್ನು ಪ್ರತಿಬಿಂಬಿಸುವ ಪ್ರಮುಖ ಹಬ್ಬವಾಗಿದ್ದು, ಸಾರ್ವಜನಿಕರು ಹಾಗೂ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಎಂಟಿಸಿ ಉಪಾಧ್ಯಕ್ಷ ನಿಖಿತ್ ರಾಜ್ ಮೌರ್ಯ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ, ಕ್ರೀಡಾಪಟುಗಳು, ಕಲಾವಿದರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.