ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹುದ್ದೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ರಾಜ್ಯ ಸರ್ಕಾರವು ರಿಷಿ ಆನಂದ್ (IAS: 2020) ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಇಲ್ಲಿಯವರೆಗೆ ಶಿವಮೊಗ್ಗ ಜಿಪಂ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಹೇಮಂತ್ ಎನ್. (IAS: 2020) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ವ್ಯವಸ್ಥಾಪಕ ನಿರ್ದೇಶಕರಾಗಿ (MD) ವರ್ಗಾವಣೆ ಮಾಡಲಾಗಿದೆ.

ವಿಜಯಪುರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ರಿಷಿ ಆನಂದ್ ಅವರನ್ನು ಇದೀಗ ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಈ ಕುರಿತು ಅಧಿಕೃತ ಅಧಿಸೂಚನೆ ಪ್ರಕಟಿಸಿದೆ.











