ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಾರ್ಯಾಲಯದ ವತಿಯಿಂದ ತಾಲೂಕು ಪಂಚಾಯಿತಿ ಕಚೇರಿಗಳ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಒಕ್ಕೂಟಗಳಲ್ಲಿ ಲೆಕ್ಕ ಪರಿಶೋಧನೆ ಕೈಗೊಳ್ಳಲು ಸಮುದಾಯ ಲೆಕ್ಕ ಪರಿಶೋಧಕರ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಕಾಂ., ಎಂ.ಕಾಂ., ಬಿಬಿಎ ಅಥವಾ ಎಂಬಿಎ (ಫೈನಾನ್ಸ್) ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅ.06-10-2026ರಿಂದ 28-10-2026ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಹಾಗೂ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಆಯಾ ತಾಲೂಕು ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ತಾಲೂಕುವಾರು ಸಂಪರ್ಕ ಸಂಖ್ಯೆಗಳು:
ಶಿವಮೊಗ್ಗ: 8746040442
ಭದ್ರಾವತಿ: 8660436211
ಹೊಸನಗರ: 82776711951
ಸಾಗರ: 9632272106
ಶಿಕಾರಿಪುರ: 9482476699
ಸೊರಬ: 9902493669
ತೀರ್ಥಹಳ್ಳಿ: 9741687576
ಈ ಕುರಿತು ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್ ಅವರು ಮಾಹಿತಿ ನೀಡಿದ್ದಾರೆ.











