Home Blog ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ: ಪ್ರಕಾಶ್ ಜಿ.ಟಿ. ನಿಟ್ಟಾಲಿ ನೂತನ ಜಿಲ್ಲಾಧಿಕಾರಿ..!!

ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ: ಪ್ರಕಾಶ್ ಜಿ.ಟಿ. ನಿಟ್ಟಾಲಿ ನೂತನ ಜಿಲ್ಲಾಧಿಕಾರಿ..!!

14
0

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾಧಿಕಾರಿಯಾಗಿದ್ದ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರಾಗಿದ್ದ ಪ್ರಕಾಶ್ ಜಿ.ಟಿ. ನಿಟ್ಟಾಲಿ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

2013ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಪ್ರಭುಲಿಂಗ ಕವಳಿಕಟ್ಟಿ ಅವರು 2026ರ ಜನವರಿ ತಿಂಗಳಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ಅವರನ್ನು ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ವರ್ಗಾವಣೆ ಆದೇಶ ಹೊರಡಿಸಿದೆ.

2018ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಪ್ರಕಾಶ್ ಜಿ.ಟಿ. ನಿಟ್ಟಾಲಿ ಅವರು ಈ ಹಿಂದೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ರಾಜ್ಯಪಾಲರ ಆದೇಶದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಅವರು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.