ಆನಂದಪುರ:
ಪ್ರತಿಯೊಂದು ಗ್ರಾಮದಲ್ಲಿಯೂ ಸಹ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇವರು ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛ ಸಂಕೀರ್ಣವನ್ನು ಘಟಕವನ್ನು ಉದ್ಘಾಟನೆ ಮಾಡಿ, ಮಹಿಳಾ ಗ್ರಾಮ ಸಭೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರತಿಯೊಬ್ಬ ನಾಗರಿಕನೂ ಸಹ ತಮ್ಮ ಗ್ರಾಮದ ಸ್ವಚ್ಛತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿವುದರ ಮೂಲಕ, ಮೊದಲು ನಿಮ್ಮ ಮನೆಯ ಸುತ್ತ ಮುತ್ತಲಿನಲ್ಲಿ ಸ್ವಚ್ಛವಾಗಿಟ್ಟುಕೊಳ್ಳಬೇಕು. ಕಳೆದ ಬಾರಿ ಡೆಂಗ್ಯೂ ಜ್ವರ ಹಳ್ಳಿ ಹಳ್ಳಿಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿತ್ತು ಇದನ್ನು ತಡೆಗಟ್ಟಲು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕೆಂದು ಸಲಹೆ ನೀಡಿದರು.
ಮಹಿಳೆಯರು ಗ್ರಾಮ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಇದರಿಂದ ಸರ್ಕಾರದಿಂದ ಸಿಗುವ ಸವಲತ್ತುಗಳು ಹಾಗೂ ಪಂಚಾಯಿತಿಯಿಂದ ಸಿಗುವ ಅನುದಾನ,ಮೂಲಸೌಕರ್ಯಗಳ ಬಗ್ಗೆ ಹೆಚ್ಚಿನ ಮಾಹಿತಿ ಸಿಗುತ್ತದೆ ಎಂದು ತಿಳಿಸಿದರು.

ಶ್ರೀ ಶಕ್ತಿ ಸಂಘಗಳಿಗೆ, ಮಹಿಳಾ ಸಹಕಾರ ಸಂಘಗಳಿಗೆ ಸರ್ಕಾರದಿಂದ ಕೇವಲ 3 ಬಡ್ಡಿದರದಲ್ಲಿ ಸಾಲ ಸೌಲಭ್ಯ ದೊರಕುತ್ತಿದೆ. ಇದರ ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿ ಜೀವನ ನಡೆಸಬಹುದು .ಸಹಕಾರ ಸಂಘಗಳ ಮೂಲಕ ಮಹಿಳೆಯರು ಸಬಲೀಕರಣ ಹೊಂದಿ ಕುಟುಂಬವನ್ನು ನಡೆಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಾನಂದ, ಗಣಪತಿ, ಜ್ಯೋತಿ, ನಟರಾಜ್, ನಾರಿ ಲೋಕಪ್ಪ, ವೀಣಾ, ರೇಣುಕಮ್ಮ, ಅರುಣ್ ಗೌಡ, ಚೇತನ, ನಾಗರತ್ನ, ಆಚಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಖಲೀಮುಲ್ಲಾ ಖಾನ್, ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಕಾಶ್, ಪ್ರಮುಖರಾದ ಕಲಸೆ ಚಂದ್ರಪ್ಪ, ಗಣಪತಿ ಮಂಡೆಗಳಲೆ, ಸೋಮಶೇಖರ್ ಲಾವಿಗೆರೆ , ಚೇತನ್ ರಾಜ್ ಕಣ್ಣೂರ್ , ಉಮೇಶ್ , ಗಜೇಂದ್ರ , ಅಶ್ವಿನ್ , ಇನ್ನಿತರರು ಉಪಸ್ಥಿತರಿದ್ದರು.
ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









