ಮನೆ ರಾಷ್ಟ್ರೀಯ ಶಾಲೆಗಳ ರಜೆ ಮುಂದೂಡಿಕೆ, ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ…..

ಶಾಲೆಗಳ ರಜೆ ಮುಂದೂಡಿಕೆ, ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ…..

194
0

ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು ನಡೆಯುತ್ತಿದ್ದು ನಿಗದಿತ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅಕ್ಟೋಬರ್ 8 ರಿಂದ ಅಕ್ಟೋಬ‌ರ್ 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆಯನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಮಂಗಳವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಿಕ್ಷಣ ಸಚಿವರು ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಅಕ್ಟೋಬ‌ರ್ ಹದಿನೆಂಟನೇ ತಾರೀಕಿನ ಒಳಗೆ ಬಾಕಿ ಇರುವ ಎಲ್ಲಾ ಸಮೀಕ್ಷೆ ಕಾರ್ಯಗಳನ್ನು ಮುಗಿಸಲು ಸೂಚನೆ ನೀಡಲಾಗಿದೆ.

ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t