
ಆನಂದಪುರ:ಶಿಕ್ಷಣದ ಜೊತೆ ಜೊತೆಗೆ ವಿದ್ಯಾರ್ಥಿಗಳಿಗೆ ಕ್ರೀಡಾಸಕ್ತಿಯನ್ನು ಸಹ ಮೂಡಿಸುವ ಕೆಲಸವಾಗಬೇಕಾಗಿದೆ ಎಂದು ಯಡೇಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರತ್ನಮ್ಮ ತಿಳಿಸಿದರು.
ಇವರು ಇಲ್ಲಿಗೆ ಸಮೀಪದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಮತ್ತು ಸಾಗರ ಇವರ ಆಶ್ರಯದಲ್ಲಿ ಆಯೋಜಿಲಾಗಿದ್ದ ಶಿವಮೊಗ್ಗ ಜಿಲ್ಲಾಮಟ್ಟದ 17 ವರ್ಷ ವಯೋಮಿತಿ ಯೊಳಗಿನ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಮತ್ತು ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.

ಶಾಲಾ ಹಂತದಲ್ಲಿಯೇ ಮಕ್ಕಳ ಶಿಕ್ಷಣ ಜೊತೆಗೆ ಕ್ರೀಡೆಗೆಹೆಚ್ಚಿನ ಮಹತ್ವ ವನ್ನು ನೀಡಬೇಕಾಗಿದೆ.ಇದರಿಂದ ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸುವುದರೊಂದಿಗೆ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡೆ ಹೆಚ್ಚು ಪ್ರಯೋಜನಕಾರಿಯಾಗಲಿದೆ .
ಪ್ರಾಥಮಿಕ ಹಾಗೂ ಪ್ರೌಢ ಹಂತದಲ್ಲಿಯೇ ಕ್ರೀಡೆಯ ಬಗ್ಗೆ ವಿಶೇಷವಾದ ಒತ್ತನ್ನು ನೀಡಬೇಕು ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ಹೆಚ್ಚಿನ ಗಮನ ಹರಿಸಬೇಕು ಹಾಗೂ ಪೋಷಕರು ಸಹ ಕ್ರೀಡೆಗೆ ವಿಶೇಷವಾಗಿ ಪ್ರೋತ್ಸಾಹವನ್ನು ನೀಡುವ ಮೂಲಕ ಮಕ್ಕಳ ಕ್ರಿಯಾಶೀಲತೆಗೆ ಹೆಚ್ಚು ಸಹಕರಿಯಾಗಬೇಕು ಎಂದರು.ಅಷ್ಟೇ ಅಲ್ಲದೆ ಜಿಲ್ಲಾಮಟ್ಟದಂತಹ ಕಾರ್ಯಕ್ರಮವನ್ನು ಇಂತಹ ಗ್ರಾಮೀಣ ಪ್ರದೇಶದಲ್ಲಿ ಆಯೋಜನೆ ಮಾಡುತ್ತಿರುವುದು ಪ್ರಸಂಶನಿಯವಾಗಿದೆ ಇಲಾಖೆಗೆ ವಿಶೇಷವಾದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಆಚಾಪುರ ಗ್ರಾಪಂ ಅಧ್ಯಕ್ಷ ಖಲಿಂವುಲ್ಲಾ ಖಾನ್ ಮಾತನಾಡಿ ಮಕ್ಕಳಲ್ಲಿರುವ ಕ್ರೀಡಾ ಆಸಕ್ತಿಗೆ ವಿಶೇಷವಾದ ಆದ್ಯತೆಯನ್ನು ನೀಡಿ ಪ್ರೋತ್ಸಾಹಿಸುವುದರ ಮೂಲಕ ಗ್ರಾಮೀಣ ಭಾಗದ ಮಕ್ಕಳ ಕ್ರೀಡಾಸಕ್ತಿಗೆ ಹೆಚ್ಚಿನ ಆದ್ಯತೆಯನ್ನು ಕೊಟ್ಟು ಅವರಿಗೆ ಸೂಕ್ತ ವಾದ ತರಬೇತಿಯನ್ನು ನೀಡಿಬೇಕು ಎಂದರು.
ಕಾರ್ಯಕ್ರಮದಲ್ಲಿ ಗ್ರಾಪಂ ಉಪ ಅಧ್ಯಕ್ಷ ಗಣಪತಿ , ಬಿಇಒ ಪರಶುರಾಮಪ್ಪ ಈ, ಶಿವಮೊಗ್ಗ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಎಂ ಪ್ರಕಾಶ್, ಸಾಗರದ ದಾಸೋಹ ಸಹಾಯಕ ನಿರ್ದೇಶಕ ಎ. ಎಚ್. ಭೂಮೇಶ್ ಟಿ, ಪಿ ಇ ಓ ರಮೇಶ್, ಜಿಲ್ಲಾ ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಅಂಜನಪ್ಪ, ಸರ್ಕಾರಿ ನೌಕರ ಸಂಘದ ತಾಲೂಕ್ ಅಧ್ಯಕ್ಷ ಸಂತೋಷ್ ಕುಮಾರ್, ಶಿವಮೊಗ್ಗ ಜಿಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ರಾಜ ಎಚ್, ಸಾಗರ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಬಲೇಶ್ವರ ಜಿ,

ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಓಂಕಾರಪ್ಪ ಬಿ, ಜಿಲ್ಲಾ ಸಮನ್ವಾಯಾಧಿಕಾರಿ ಚಂದ್ರಪ್ಪ ಕೆ, ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ಲಕ್ಷ್ಮಣ್ ನಾಯಕ್ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಸುಬ್ರಮಣ್ಯ ಟಿ ಪಿ, ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್ ಹಾಗೂ ಯಡೇಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.
ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t








