Home Blog ನಾಳೆ ಪೊಲೀಸ್ ಠಾಣೆಯಲ್ಲಿ ರಕ್ತದಾನಕ್ಕೆ ಖಾಕಿ ಕರೆ..!

ನಾಳೆ ಪೊಲೀಸ್ ಠಾಣೆಯಲ್ಲಿ ರಕ್ತದಾನಕ್ಕೆ ಖಾಕಿ ಕರೆ..!

23
0

ಸಾಗರ(ಆನಂದಪುರ): ಆನಂದಪುರ ಪೊಲೀಸ್ ಠಾಣೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ದಾಖಲೆಯ ಮೂರನೇ ಬಾರಿಗೆ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ಆ.31ರ ಸೋಮವಾರ ನಾಳೆ ಬೆಳಿಗ್ಗೆ 10 ಗಂಟೆಯಿಂದ ಆನಂದಪುರ ಪೊಲೀಸ್ ಠಾಣೆ ಆವರಣದಲ್ಲಿ ಶಿಬಿರ ನಡೆಯಲಿದೆ. “ನಿಯಮಿತ ರಕ್ತದಾನ ಮಾಡಿ, ಹೃದಯಾಘಾತದಿಂದ ದೂರವಾಗಿ” ಎಂಬ ಸಂದೇಶದೊಂದಿಗೆ ಶಿಬಿರ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವಂತೆ ಪಿಎಸ್ಐ ಪ್ರವೀಣ್ ಮನವಿ ಮಾಡಿದ್ದಾರೆ.

ರಕ್ತದಾನವು ಅಗತ್ಯವಿರುವವರಿಗೆ ನೆರವಾಗುವ ಮಹತ್ವದ ಸಾಮಾಜಿಕ ಸೇವೆಯಾಗಿದ್ದು, ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಜಾಹೀರಾತು