Home Shivamogga ಚೆಸ್ ಆಟದ ನಡುವೆ ವಿಧಿಯಾಟ: 16 ವರ್ಷದ SSLC ವಿದ್ಯಾರ್ಥಿ ದುರಂತ ಸಾವು..!!

ಚೆಸ್ ಆಟದ ನಡುವೆ ವಿಧಿಯಾಟ: 16 ವರ್ಷದ SSLC ವಿದ್ಯಾರ್ಥಿ ದುರಂತ ಸಾವು..!!

24
0

✒️..ಅಮಿತ್ ಆರ್ ಆನಂದಪುರ

ಶಿವಮೊಗ್ಗ: ಚೆಸ್ ಆಡುತ್ತಿದ್ದ ವೇಳೆ ಕುಸಿದು ಬಿದ್ದ 16 ವರ್ಷದ SSLC ವಿದ್ಯಾರ್ಥಿಯೊಬ್ಬರು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿರುವ ಘಟನೆ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮವಾರ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ವಿನಯ್ (16), ತಂದೆ ಜಾಕಣಚಾರಿ, ಹಳೇ ಮುಗಳಗೇರಿ, ಶಿಕಾರಿಪುರ ತಾಲೂಕು ಎಂದು ಗುರುತಿಸಲಾಗಿದೆ. ಪ್ರಸ್ತುತ ತಮ್ಮ ಅಜ್ಜ-ಅಜ್ಜಿಯೊಂದಿಗೆ ತಮ್ಮಡಿಹಳ್ಳಿ ಗ್ರಾಮದಲ್ಲಿ ವಾಸವಿದ್ದು, ಅಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ ಮಾಡುತ್ತಿದ್ದನು.

ಸೋಮವಾರ ಸಂಜೆ ಸುಮಾರು 3:45 ರ ವೇಳೆಗೆ ಶಾಲೆಯಲ್ಲಿ ಚೆಸ್ ಆಡುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ಏಕಾಏಕಿ ಕುಸಿದು ಬಿದ್ದಿದ್ದಾನೆ. ಕೂಡಲೇ ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಯನ್ನು ಆಯನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ಸಂದರ್ಭದಲ್ಲಿ ದಾರಿ ಮಧ್ಯೆ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಘಟನೆ ಕುರಿತು ಕುಂಸಿ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ವಿದ್ಯಾರ್ಥಿಯ ಸಾವಿನ ನಿಖರ ಕಾರಣದ ಕುರಿತು ಹೆಚ್ಚಿನ ತನಿಖೆ ಹಾಗೂ ನಿಗಾ ವಹಿಸಲಾಗುತ್ತಿದೆ ಎಂದು ತಿಳಿದು ಬಂದಿದೆ .

ಜಾಹೀರಾತು