Home Shivamogga ವಿದ್ಯಾರ್ಥಿವೇತನ, ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ..!!

ವಿದ್ಯಾರ್ಥಿವೇತನ, ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ..!!

0
10

ಶಿವಮೊಗ್ಗ, ಅ. 23: ಸಮಾಜ ಕಲ್ಯಾಣ ಇಲಾಖೆಯು 2026-27ನೇ ಸಾಲಿನಲ್ಲಿ ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಹಾಗೂ ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಶಿವಮೊಗ್ಗ ತಾಲ್ಲೂಕಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹೊಸ ಹಾಗೂ ನವೀಕರಣ ವಿದ್ಯಾರ್ಥಿಗಳು ಇಲಾಖೆಯ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ ಅಭಿಯಾನ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಾದ http://www.sw.kar.nic.in, twd.karnataka.gov.inಹಾಗೂ ಎಸ್‌ಎಸ್‌ಪಿ (SSP) ಮತ್ತು ಎಚ್‌ಎಂಐಎಸ್ (HMIS) ಪೋರ್ಟಲ್‌ಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ವಿದ್ಯಾನಗರ, ಬಿ.ಎಚ್. ರಸ್ತೆ, ಶಿವಮೊಗ್ಗ. ದೂರವಾಣಿ: 08182-240512 / 9480843194.

ಈ ಕುರಿತು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

NO COMMENTS