Home Shivamogga Sagara ಕಾರು–ಬೈಕ್ ಮುಖಾಮುಖಿ ಡಿಕ್ಕಿ: 19 ವರ್ಷದ ಯುವಕ ದುರ್ಮರಣ..!!

ಕಾರು–ಬೈಕ್ ಮುಖಾಮುಖಿ ಡಿಕ್ಕಿ: 19 ವರ್ಷದ ಯುವಕ ದುರ್ಮರಣ..!!

53
0

ಸಾಗರ: ಸಾಗರ ತಾಲ್ಲೂಕಿನ ಬಳಸಗೋಡು ಸಮೀಪ ಬುಧವಾರ ರಾತ್ರಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರ 19 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೃತರನ್ನು ಚಿಪ್ಳಿ ಗ್ರಾಮದ ವೆಂಕಟೇಶ್ ಅವರ ಪುತ್ರ ಅರ್ಜುನ್ (19) ಎಂದು ಗುರುತಿಸಲಾಗಿದೆ.

ಅರ್ಜುನ್ ಅವರು ಸಾಗರದಿಂದ ಆನಂದಪುರ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಶಿವಮೊಗ್ಗ ಕಡೆಯಿಂದ ಸಾಗರದತ್ತ ಬರುತ್ತಿದ್ದ ಎಸ್.ಎನ್.ನಗರ ಮೂಲದ ಕಾರು ಬಳಸಗೋಡು ಸಮೀಪ ಎದುರಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಅರ್ಜುನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಳ್ಳುವ ಪ್ರಕ್ರಿಯೆ ಮುಂದುವರಿದಿದೆ.

ಜಾಹೀರಾತು