ಶಿವಮೊಗ್ಗ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅನ್ನಭಾಗ್ಯ ಯೋಜನೆಯಡಿ 2026ರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರವನ್ನು ಆಗಸ್ಟ್‌ನಲ್ಲೇ ಒಂದೇ ಬಾರಿಗೆ ವಿತರಿಸಲು ಸರ್ಕಾರ ಆದೇಶಿಸಿದೆ.
ಅಂತ್ಯೋದಯ ಅನ್ನ ಯೋಜನೆಯಡಿ ಪಡಿತರ ಚೀಟಿಗೆ ಎರಡು ತಿಂಗಳ ಒಟ್ಟು 70 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು.ಆದ್ಯತಾ ಪಡಿತರ ಚೀಟಿಗೆ ಎರಡು ತಿಂಗಳ ಒಟ್ಟು 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ.

ಪಡಿತರ ಚೀಟಿದಾರರು ಆಹಾರ ಧಾನ್ಯ ಪಡೆಯುವಾಗ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಂಚಿಕೆಗಾಗಿ ಎರಡು ಬಾರಿ ಕಡ್ಡಾಯವಾಗಿ ಬಯೋಮೆಟ್ರಿಕ್ ನೀಡಿ ಪಡಿತರ ಪಡೆಯಬೇಕು. ಪ್ರತಿದಿನ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಪಡಿತರ ವಿತರಣೆಗೆ ಸರ್ವರ್ ಲಭ್ಯವಿರುವುದರಿಂದ, ಆಗಸ್ಟ್ 31ರೊಳಗಾಗಿ ನ್ಯಾಯಬೆಲೆ ಅಂಗಡಿಗೆ ತೆರಳಿ ಪಡಿತರ ಪಡೆಯುವಂತೆ ಸೂಚಿಸಲಾಗಿದೆ.
ಪಡಿತರ ವಿತರಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದಲ್ಲಿ ಕೇಂದ್ರ ಸಹಾಯವಾಣಿ 1967ಕ್ಕೆ ಕರೆ ಮಾಡಬಹುದು ಅಥವಾ ಹತ್ತಿರದ ಆಹಾರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.
ಜಾಹೀರಾತು












