Home Blog ರೈತ ಸಂಘದ ಮೂರು ತಿಂಗಳ ಹೋರಾಟಕ್ಕೆ ಜಯ ದೊರೆತಿದೆ : ದಿನೇಶ್ ಶಿರವಾಳ..!!

ರೈತ ಸಂಘದ ಮೂರು ತಿಂಗಳ ಹೋರಾಟಕ್ಕೆ ಜಯ ದೊರೆತಿದೆ : ದಿನೇಶ್ ಶಿರವಾಳ..!!

15
0

✒️..ಅಮಿತ್ ಆರ್ ಆನಂದಪುರ

ಶಿವಮೊಗ್ಗ(ಸಾಗರ): ನಮ್ಮ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚೂನ್ನಪ್ಪ ಪೂಜಾರಿ ಹಾಗೂ ಗೌರವಾಧ್ಯಕ್ಷ ಶಶಿಕಾಂತ್ ಪೂಜಾರಿ ಅವರ ನೇತೃತ್ವದಲ್ಲಿ ಕಬ್ಬಿನ ಬೆಲೆ ಹೆಚ್ಚಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಳೆದ ಮೂರು ತಿಂಗಳಿಂದ ನಡೆಯುತ್ತಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ಸದ್ಯಕ್ಕೆ ತಾತ್ಕಾಲಿಕ ವಿರಾಮ ದೊರೆತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಶಿವಮೊಗ್ಗ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ತಿಳಿಸಿದರು.

ಅವರು ಪತ್ರಕರ್ತರೊಂದಿಗೆ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ನಡೆದ ಮಾತುಕತೆ ಹಾಗೂ ಒಡಂಬಡಿಕೆಯ ಫಲವಾಗಿ ಪ್ರತಿ ಟನ್ ಕಬ್ಬಿಗೆ ₹300 ಹೆಚ್ಚಳ ಘೋಷಣೆಯಾಗಿದೆ. ಇದರಿಂದ ರಾಜ್ಯದ ಕಬ್ಬು ಬೆಳೆಗಾರರಿಗೆ ಒಟ್ಟು ₹1,200 ಕೋಟಿ ಹೆಚ್ಚುವರಿ ಆರ್ಥಿಕ ಲಾಭ ದೊರೆಯಲಿದೆ ಎಂದು ತಿಳಿಸಿದರು.

ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹300 ಹೆಚ್ಚಳ ಮಾಡಿರುವುದರಿಂದ 3,600 ಆಗಿದೆ ಆದರೆ ಕೆಲವು ಕಡೆಯಲ್ಲಿ ರಿಕವರಿ ಆಧಾರದ ಮೇಲೆ ಕಬ್ಬಿನ ಬೆಲೆ ನಿಗದಿಯಾಗಿದೆ. ಆದರೆ ರೈತ ಸಂಘವು ಕಾರ್ಖಾನೆಗಳಿಂದ ಪ್ರತಿ ಟನ್‌ಗೆ ₹4,500 ಹಾಗೂ ರಾಜ್ಯ ಸರ್ಕಾರದಿಂದ ಎಸ್‌ಎಪಿ (SAP) ಅಡಿಯಲ್ಲಿ ಹೆಚ್ಚುವರಿಯಾಗಿ ₹1,000 ನೀಡಬೇಕೆಂದು ಪ್ರಮುಖವಾಗಿ ಒತ್ತಾಯಿಸಿತ್ತು.

ರಾಜ್ಯದಲ್ಲಿ ಒಟ್ಟು 400 ಲಕ್ಷ ಟನ್ ಕಬ್ಬು ಉತ್ಪಾದನೆಯಾಗುತ್ತಿದ್ದು, ಪ್ರತಿ ಟನ್‌ಗೆ ₹300 ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕಬ್ಬು ಬೆಳೆಗಾರರಿಗೆ ಒಟ್ಟಾರೆ ₹1,200 ಕೋಟಿ ಹೆಚ್ಚುವರಿ ಹಣ ದೊರೆಯಲಿದೆ ಇದು ಒಂದು ದೊಡ್ಡ ಗೆಲುವಾಗಿದ ರೈತ ಸಂಘಕ್ಕೆ ಎಂದರು.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಕಬ್ಬು ಬೆಳೆಗಾರರಿಗೆ ₹50 ಹೆಚ್ಚುವರಿ ಹಣ ನೀಡಲಾಗಿತ್ತು. ಆದರೆ ಪ್ರಸ್ತುತ ಸರ್ಕಾರ ಈವರೆಗೆ ಒಂದು ರೂಪಾಯಿಯನ್ನೂ ಹೆಚ್ಚುವರಿಯಾಗಿ ನೀಡಿಲ್ಲ ,ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದೊಳಗೆ ರಾಜ್ಯ ಸರ್ಕಾರವು ಎಸ್‌ಎಪಿ ಅಡಿಯಲ್ಲಿ ಹೆಚ್ಚುವರಿ ಬೆಲೆ ಘೋಷಿಸಬೇಕು. ಇಲ್ಲವಾದಲ್ಲಿ ರೈತ ಸಂಘದ ವತಿಯಿಂದ ಮತ್ತಷ್ಟು ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ಪ್ರಮುಖರಾದ ಸಂತೋಷ್, ವಾಸು ಜಂಬೂರು ಮನೆ ಉಪಸ್ಥಿತರಿದ್ದರು.