✒️..ಅಮಿತ್ ಆರ್ ಆನಂದಪುರ
ಸಾಗರ: ಟಿಟಿ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.
ಗಾಯಗೊಂಡ ಬೈಕ್ ಸವಾರನನ್ನು ಅರುಣ್ ಕುಮಾರ್ (45), ತಂದೆ ದಯಾನಂದ, ಬಿಜ್ವಳ್ಳಿ ನಿವಾಸಿ ಎಂದು ಗುರುತಿಸಲಾಗಿದೆ.
ಜೋಗದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಟಿಟಿ ವಾಹನ ಹಾಗೂ ಆನಂದಪುರದಿಂದ ಸಾಗರದ ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಆನಂದಪುರ ರಾಷ್ಟ್ರೀಯ ಹೆದ್ದಾರಿಯ ಅರಣ್ಯ ಇಲಾಖೆಯ ವಸತಿ ನಿಲಯದ ಮುಂಭಾಗ ಈ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಬೈಕ್ ಸವಾರ ಟಿಟಿ ವಾಹನದ ಅಡಿಭಾಗದಲ್ಲಿ ಸಿಲುಕಿಕೊಂಡಿದ್ದು, ಅವರ ಕಾಲಿಗೆ ತೀವ್ರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗಾಯಾಳುವನ್ನು ಪೊಲೀಸರು ಮತ್ತು ಸ್ಥಳೀಯರ ಸಹಾಯದಿಂದ ಮೊದಲು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಆನಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪ್ರವೀಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಜಾಹೀರಾತು












