ಶಿವಮೊಗ್ಗ ;ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ರಾಜ್ಯದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳ ಅತಿವೃಷ್ಠಿ ಹಾಗೂ ಅನಾವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅದರಂತೆ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಆಗಸ್ಟ್ 7ರಿಂದ 9ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು, ಅತಿವೃಷ್ಠಿ ಹಾಗೂ ಅನಾವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಲಿದ್ದಾರೆ.
ಆ. 07 ರಂದು ಬೆಳಗ್ಗೆ 10 ಕ್ಕೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಬಂಗಾರಧಾಮಕ್ಕೆ ಭೇಟಿ ನೀಡಲಿದ್ದಾರೆ ಹಾಗೂ ಸೊರಬದ ರಂಗಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1.30 ಕ್ಕೆ ಸೊರಬ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಹಾಗೂ ಸೊರಬ ಕ್ಷೇತ್ರ ವ್ಯಾಪ್ತಿಯ ಅತಿವೃಷ್ಠಿ /ಅನಾವೃಷ್ಠಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಆ. 08 ರಂದು ಬೆಳಿಗ್ಗೆ 10 ಕ್ಕೆ ಶಿಕಾರಿಪುರ ತಾಲೂಕು ವ್ಯಾಪ್ತಿಯ ಅತಿವೃಷ್ಠಿ/ಅನಾವೃಷ್ಠಿ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ತಾಲೂಕು ವ್ಯಾಪ್ತಿಯ ಅತಿವೃಷ್ಠಿ/ಅನಾವೃಷ್ಠಿ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಆ.09 ರಂದು ಬೆಳಿಗ್ಗೆ 9.30 ಕ್ಕೆ ತೀರ್ಥಹಳ್ಳಿ ತಾಲೂಕು ವ್ಯಾಪ್ತಿಯ ಇಂದಿರಾನಗರದ ಗುಡ್ಡ ಕುಡಿತದ ಸ್ಥಳ ಹಾಗೂ ಸಂತ್ರಸ್ಥರ ಮನೆಗೆ ಭೇಟಿ ನೀಡಲಿದ್ದಾರೆ. ಬೆ. 10.30 ಕ್ಕೆ ತೀರ್ಥಹಳ್ಳಿ ತಾಲೂಕು ವ್ಯಾಪ್ತಿಯ ಅತಿವೃಷ್ಠಿ/ಅನಾವೃಷ್ಠಿ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.











