ಆನಂದಪುರದಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ
✒️..ಅಮಿತ್ ಆರ್ ಆನಂದಪುರ
ಸಾಗರ(ಆನಂದಪುರ): ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಸರ್ಕಾರಿ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಆನಂದಪುರದಲ್ಲಿ ಇಂದು ನಡೆದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಆಡಳಿತವನ್ನು ಜನರಿಗೆ ಇನ್ನಷ್ಟು ಹತ್ತಿರವಾಗಿಸುವುದು ಇಂತಹ ಕಾರ್ಯಕ್ರಮಗಳ ಮುಖ್ಯ ಉದ್ದೇಶವಾಗಿದೆ ಎಂದರು.
ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಮೂಲಕ ಪರಿಹಾರ ಕಂಡುಕೊಳ್ಳಲು ಪ್ರಜಾಸೇವಾ ಆಂದೋಲನ ಸಹಕಾರಿಯಾಗಲಿದೆ. ಹೋಬಳಿ ಮಟ್ಟದಲ್ಲಿಯೇ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಗ್ರಾಮೀಣ ಭಾಗದ ಜನರು ತಮ್ಮ ಅಹವಾಲುಗಳನ್ನು ನೇರವಾಗಿ ಅಧಿಕಾರಿಗಳ ಮುಂದಿಡಲು ಅವಕಾಶ ದೊರೆಯಲಿದೆ ಎಂದು ತಿಳಿಸಿದರು.

ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಸೇವೆಗಳು ಮತ್ತು ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ಈ ಕಾರ್ಯಕ್ರಮ ವೇದಿಕೆಯಾಗಲಿದೆ. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಪ್ರಯೋಜನ ತಲುಪಿಸುವುದು ಹಾಗೂ ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸುವುದು ಇದರ ಪ್ರಮುಖ ಆಶಯವಾಗಿದೆ.
ಗ್ರಾಮೀಣ ಭಾಗದ ಜನರು ಸರ್ಕಾರಿ ಸೌಲಭ್ಯಗಳನ್ನು ಪಡೆಯುವಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಇಂತಹ ಜನಸಂಪರ್ಕ ಕಾರ್ಯಕ್ರಮಗಳು ಮಹತ್ವ ಪಡೆದುಕೊಂಡಿವೆ. ಸ್ಥಳೀಯ ಮಟ್ಟದಲ್ಲಿಯೇ ಅಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆಗಳನ್ನು ವಿವರಿಸಲು ಅವಕಾಶ ದೊರೆಯುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಜನರ ಅಹವಾಲುಗಳನ್ನು ಸಂಬಂಧಪಟ್ಟ ಇಲಾಖೆಗಳು ಗಂಭೀರವಾಗಿ ಪರಿಗಣಿಸಿ, ನಿಯಮಾನುಸಾರ ಪರಿಹಾರ ಒದಗಿಸುವ ಮೂಲಕ ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾರ್ವಜನಿಕರ ವಿಶ್ವಾಸವನ್ನು ಹೆಚ್ಚಿಸಲು ಸಾಧ್ಯವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಸಾಗರ ಉಪ ವಿಭಾಗಾಧಿಕಾರಿ ವೀರೇಶ್, ಐಪಿಎಸ್ ಬೆನಕ ಪ್ರಸಾದ್, ತಾಸಿಲ್ದಾರ್ ಪ್ರತಿಭಾ, ಕಾರ್ಯನಿರ್ವಾಧಿಕಾರಿ ಮೌನೇಶ್, ಸರ್ಕಾರಿ ನೌಕರರ ಸಂಘ ತಾಲೂಕು ಅಧ್ಯಕ್ಷ ಸಂತೋಷ್ ಕುಮಾರ್ ಹಾಗೂ ಜಿಲ್ಲಾ ತಾಲೂಕು ಮತ್ತು ಹೋಬಳಿ ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು



