Home Blog SGFI ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಪದಕಗಳ ಗರಿ ಮುಡಿಗೇರಿಸಿಕೊಂಡ ಪ್ರತಿಭೆಗಳು..!!

SGFI ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಪದಕಗಳ ಗರಿ ಮುಡಿಗೇರಿಸಿಕೊಂಡ ಪ್ರತಿಭೆಗಳು..!!

0
8

ಶಿವಮೊಗ್ಗ: ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ (SGFI) ವತಿಯಿಂದ ಆಯೋಜಿಸಲಾದ ರಾಜ್ಯಮಟ್ಟದ ಶಾಲಾ ಕ್ರೀಡಾಕೂಟದ ಕುಸ್ತಿ ಸ್ಪರ್ಧೆಗಳಲ್ಲಿ ಶಿವಮೊಗ್ಗದ ಡಿ.ವೈ.ಇ.ಎಸ್. (DYES) ಸ್ಪೋರ್ಟ್ಸ್ ಹಾಸ್ಟೆಲ್‌ನ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ವಿವಿಧ ತೂಕದ ವಿಭಾಗಗಳಲ್ಲಿ ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದು ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ.

ಫ್ರೀ ಸ್ಟೈಲ್ ವಿಭಾಗ:

  • ಸಮರ್ಥ್ — 38 ಕೆ.ಜಿ. ವಿಭಾಗದಲ್ಲಿ ತೃತೀಯ ಸ್ಥಾನ.
  • ಶಶಾಂಕ್ — 52 ಕೆ.ಜಿ. ವಿಭಾಗದಲ್ಲಿ ತೃತೀಯ ಸ್ಥಾನ.

ಗ್ರೀಕೊ ರೋಮನ್ ವಿಭಾಗ:

  • ಅನಿಲ್ ಕುಮಾರ್ — 45 ಕೆ.ಜಿ. ವಿಭಾಗದಲ್ಲಿ ತೃತೀಯ ಸ್ಥಾನ.
  • ಜೀವನ ಎಚ್.ಎಂ. — 45 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನ.
  • ಮನೋಜ್ ಭಜಂತ್ರಿ — 48 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನ.
  • ಜಯಂತ್ ಟಿ. — 51 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನ.
  • ಭುವನ್ ಕುಮಾರ್ — 60 ಕೆ.ಜಿ. ವಿಭಾಗದಲ್ಲಿ ತೃತೀಯ ಸ್ಥಾನ.

ಮಹಿಳಾ ವಿಭಾಗ:

  • ಆರಾಧ್ಯ — 30 ಕೆ.ಜಿ. ವಿಭಾಗದಲ್ಲಿ ತೃತೀಯ ಸ್ಥಾನ.

ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಗಳಲ್ಲಿ ಪದಕಗಳನ್ನು ಗಳಿಸಿದ ಡಿ.ವೈ.ಇ.ಎಸ್. ಸ್ಪೋರ್ಟ್ಸ್ ಹಾಸ್ಟೆಲ್‌ನ ಕ್ರೀಡಾಪಟುಗಳ ಸಾಧನೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾ ನಾಯ್ಕ್ ಅಭಿನಂದನೆ ಸಲ್ಲಿಸಿದ್ದಾರೆ.ಕುಸ್ತಿ ತರಬೇತುದಾರರಾದ ಸಂಜಯ್ ಮತ್ತು ರಾಜಪ್ಪ ಪಳಕೆ ಕ್ರೀಡಾಪಟುಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

NO COMMENTS