ಶಿವಮೊಗ್ಗ: ನಗರದ ಬಿ.ಎಚ್. ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕುವೆಂಪು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಪ್ರಾಧ್ಯಾಪಕರ ಸಂಘ (ರಿ.) ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಯೋಗದಲ್ಲಿ ಅರ್ಥಶಾಸ್ತ್ರ ವಿಷಯದ ಪಠ್ಯಕ್ರಮ ಆಧಾರಿತ ಕಾರ್ಯಾಗಾರವನ್ನು ಗುರುವಾರ (ಅ.1) ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ. ಕೇಶವ ಉದ್ಘಾಟಿಸಿದರು. ವಿದ್ಯಾರ್ಥಿಗಳು ಗಣಕೀಕೃತ ಹಾಗೂ ಕೌಶಲ್ಯಾಧಾರಿತ ಪಠ್ಯಕ್ರಮವನ್ನು ಅಳವಡಿಸಿಕೊಳ್ಳುವ ಮೂಲಕ ತಮ್ಮ ಭವಿಷ್ಯಕ್ಕೆ ಪೂರಕವಾದ ಜ್ಞಾನ ಮತ್ತು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಂದೇಶ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ. ರಂಗನಾಥ್ ರಾವ್ ಕರಾಡ್ ವಹಿಸಿದ್ದರು.

ಕುವೆಂಪು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನಿರ್ದೇಶಕರು, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಧ್ಯಾಪಕರು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಸಿಂಧು ನಾಗರಾಜ್ ಪ್ರಾರ್ಥನೆ ನೆರವೇರಿಸಿದರು. ಸಂಘದ ಅಧ್ಯಕ್ಷರಾದ ಡಾ. ಧನಂಜಯ್ ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಘದ ಕಾರ್ಯದರ್ಶಿ ಡಾ. ವರದರಾಜ್ ಎಸ್. ಕಾರ್ಯಕ್ರಮ ನಿರೂಪಿಸಿದರು. ಡಾ. ನಾಗರಾಜ್ ವಂದನಾರ್ಪಣೆ ನೆರವೇರಿಸಿದರು.
ಕಾರ್ಯಕ್ರಮದ ಅಂಗವಾಗಿ 2025–26ನೇ ಸಾಲಿನಲ್ಲಿ ನಿವೃತ್ತರಾದ ಪ್ರಾಧ್ಯಾಪಕರಿಗೆ ಸನ್ಮಾನ ಹಾಗೂ ಪಿಎಚ್.ಡಿ. ಸಾಧಕರಿಗೆ ಗೌರವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.











